4.40 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

cybe crime
Published on

ಹುಬ್ಬಳ್ಳಿ: ಬ್ಯಾಂಕ್ ಕೆವೈಸಿ ಅಪ್‌ಡೇಟ್ ಮಾಡದಿದ್ದರೆ ನಿಮ್ ಖಾತೆ ಬಂದ್ ಆಗಲಿದೆ ಎಂದು ಹೆದರಿಸಿದ ವಂಚಕರು, ಧಾರವಾಡ ವಿದ್ಯಾಗಿರಿಯ ನಿವೃತ್ತ ಉದ್ಯೋಗಿಯೊಬ್ಬರಿಂದ 4.40 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮೊಬೈಲ್ ಫೋನ್ ನಂಬರ್ ಕೊಟ್ಟ ಕರೆ ಮಾಡುವಂತೆ ವಂಚಕರು, ರಂಗಾರಾವ್ ಎನ್ನುವವರಿಗೆ ಸಂದೇಶ ರವಾನಿಸಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರ ಪಡೆದು ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ರಂಗಾರಾವ್ ಪುತ್ರ ಸಿಇಎನ್ ಕ್ರೈಂ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net