

ಬೆಂಗಳೂರು : ಟರ್ಕಿ ದೇಶದ ನಿಷೇಧಿತ ನೋಟುಗಳ ಚಲಾವಣೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸತ್ಯವೇಲು ಮತ್ತು ಧರ್ಮಪುರಿಯ ಶರವಣ ಬಂಧಿತರು. 4.5 ಕೋಟಿ ರೂ. ಮೌಲ್ಯದ 5 ಲಕ್ಷ ಮುಖಬೆಲೆಯ 97 ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿ.7ರ ಮಧ್ಯಾಹ್ನ ವೇಲಂಕಣ್ಣಿ ಸರ್ಕಲ್‌ನಲ್ಲಿ ಆರೋಪಿಗಳು ಟರ್ಕಿ ನೋಟು ಚಲಾವಣೆಗೆ ಯತ್ನಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನೋಟುಗಳು ಪತ್ತೆಯಾಗಿವೆ.ಡಿ.6ರಂದು ತಮಿಳುನಾಡಿನಿಂದ ಬೆಂಗಳೂರಿಗೆ ಪ್ರಯಣಿಸುವಾಗ ಪ್ರಯಾಣಿಕರ ಬಳಿ ಟರ್ಕಿ ನೋಟುಗಳನ್ನು ಕದ್ದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಬಗ್ಗೆ ಅನುಮಾನವಿದ್ದು, ತನಿಖೆ ನಡೆಸಲಾಗುತ್ತಿದೆ. ಜೇಬುಗಳ್ಳತನ ಸಂಬಂಧ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಆರೋಪಿಗಳು ಸುಳ್ಳು ಹೇಳುತ್ತಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.