4.50 ಕ್ವಿಂಟಾಲ್ ಪಡಿತರ ಅಕ್ಕಿ ವಶ

14 hkr 02
Published on

ಹಿರೇಕೆರೂರ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆಟೋ ಸಮೇತ 4.50 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡ ಘಟನೆ ಪಟ್ಟಣದ ಹೊರಭಾಗದಲ್ಲಿ ಚನ್ನಳ್ಳಿ ರಸ್ತೆ ಹಾಲಿನ ಡೇರಿ ಬಳಿ ಬುಧವಾರ ನಡೆದಿದೆ.
ಪಟ್ಟಣದಲ್ಲಿ ಅಕ್ಕಿ ಖರೀದಿಸಿಕೊಂಡು ಆಟೋದಲ್ಲಿ ಬೆಳಗ್ಗೆ 10 ಗಂಟೆಯ ಸುಮಾರಿಗೆ ಚನ್ನಳ್ಳಿಯ ಕಡೆಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ಹಾಲಿನ ಡೇರಿಯ ಬಳಿ ಪ್ರಭಾರಿ ಆಹಾರ ನಿರೀಕ್ಷಕ ನಟರಾಜ ನಂದೀಹಳ್ಳಿ ನೇತೃತ್ವದ ತಂಡ ಈ ದಾಳಿ ನಡೆಸಿತು. 4.50 ಕ್ವಿಂಟಾಲ್ ಅಕ್ಕಿ, ಆಟೋ ವಶಪಡಿಸಿಕೊಳ್ಳಲಾಗಿದೆ. ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ನಭಾಗದ್ಯ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿರುವವರ ವಿರುದ್ಧ ಕೇವಲ ಕಾಟಾಚಾರಕ್ಕೆ ಎಂಬಂತೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಕ್ರಮ ಬೃಹತ್ ಜಾಲವಿದ್ದು, ಸೂಕ್ತ ತನಿಖೆ ಮಾಡಬೇಕು. ಇಲಾಖೆ ಅಧಿಕಾರಿಗಳು ಈ ಬಗ್ಗೆ ದಿನದ 24 ಗಂಟೆಗಳ ಕಾಲ ತೀವ್ರ ನಿಗಾವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net