ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರು ಪಾಲು! ಕುಟುಂಬಸ್ಥರಲ್ಲಿ ಮುಗಿಲು ಮುಟ್ಟಿದ ಆಕ್ರಂದನ

WhatsApp-Image-2024-05-16-at-5.17.42-PM-1
Published on

ಆಲೂರು: ಕೆರೆಯಲ್ಲಿ ಈಜಲು ಹೋಗಿದ್ದ ಐವರ ಪೈಕಿ ನಾಲ್ವರು ಬಾಲಕರು ಈಜಲಾಗದೆ, ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಬಾಲಕರು. ಘಟನೆಯಲ್ಲಿ ಮತ್ತೊಬ್ಬ ಬಾಲಕ ಚಿರಾಗ್ (10) ಕೂಡ ಇಳಿದಿದ್ದು, ಅದೃಷ್ಟದಂತೆ ಸಾವಿನಿಂದ ಪಾರಾಗಿದ್ದಾನೆ. ಸದ್ಯ ಆತನಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.

ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ, ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸುವ ಯತ್ನದಲ್ಲಿ ಮುಳುಗಿ, ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿದ್ದು, ಶವಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಆಗಮಿಸಿ ಶವ ಹುಡುಕಾಟ ಕಾರ್ಯವನ್ನು ಚುರುಕಾಗಿ ನಡೆಸಲು ಸೂಚಿಸಿ, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net