4 ಸಾವಿರ ಬೆಂಬಲ ಬೆಲೆ ಘೋಷಿಸಲಿ

07-april-hdl-02
ಈರುಳ್ಳಿ ಮತ್ತು ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ, ಕೊಪ್ಪಳ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಯಾಟಿ, ಖಜಾಂಚಿ ಶರಣಪ್ಪ ಇತರರಿದ್ದರು.
Published on

ಹೂವಿನಹಡಗಲಿ: ಈರುಳ್ಳಿ ಮತ್ತು ಟೊಮ್ಯಾಟೋ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸಿ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದಿಂದ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಈರುಳ್ಳಿ ಮತ್ತು ಟೊಮ್ಯಾಟೋ ರಸ್ತೆ ಮೇಲೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.

ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ಮಾತನಾಡಿ, ಈರುಳ್ಳಿ ಬೆಳೆಗೆ ಅನೇಕ ರೋಗಗಳು ಬಂದು ಬೆಳೆಹಾನಿಗೀಡಾಗಿವೆ. ರೈತ ಅನೇಕ ಕಷ್ಟಗಳನ್ನು ಅನುಭವಿಸಿ ಈರುಳ್ಳಿ ಬೆಳೆದಿದ್ದಾನೆ. ಆದರೆ, ಅವುಗಳಿಗೆ ಸಮರ್ಪಕವಾಗಿ ಬೆಲೆ ದೊರಕುತ್ತಿಲ್ಲ. ಸಾಲ ಮಾಡಿಕೊಂಡು ಟೊಮ್ಯಾಟೋ ಬೆಳೆದ ರೈತರಿಗೆ ಸರಿಯಾದ ಬೆಲೆ ಸಿಗದ ಕಾರಣ ಬೆಳೆಯನ್ನು ಜಮೀನುಗಳಲ್ಲಿಯೇ ಬಿಡುತ್ತಿದ್ದಾರೆ.

ಸಾಲ ಮಾಡಿದ ಹಣವನ್ನು ತೀರಿಸಲು ಆಗುತ್ತಿಲ್ಲ. ಸರ್ಕಾರ ಟೊಮ್ಯಾಟೋ ಮತ್ತು ಈರುಳ್ಳಿ ಬೆಳೆಗಳಿಗೆ ಕನಿಷ್ಠ 4 ಸಾವಿರ ಬೆಂಬಲ ಬೆಲೆಯನ್ನು ಘೋಷಿಸಬೇಕು. ರಾಜ್ಯದ ಎಲ್ಲ ತಾಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ಈರುಳ್ಳಿ ಮತ್ತು ಟೊಮ್ಯಾಟೋ ಖರೀದಿಸಬೇಕು ಎಂದರು. ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಸಂತೋಷ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಈರುಳ್ಳಿ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ, ಕೊಪ್ಪಳ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಯಾಟಿ, ಖಜಾಂಚಿ ಶರಣಪ್ಪ, ರೈತರಾದ ಗುರುಬಸವರಾಜ, ಪಕ್ಕೀರಯ್ಯ, ಸುಪುತ್ರ, ಯಾತದ ಪ್ರಭು, ಕೊಟ್ರೇಶ್, ನಾಗರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net