ಕರ್ನಾಟಕ ಬಂದ್‌ನಿಂದಾಗಿ ಎಫ್‌ಕೆಸಿಸಿಐಗೆ 400 ಕೋಟಿ ನಷ್ಟ

Published on


ಬೆಂಗಳೂರು: ಕರ್ನಾಟಕ ಬಂದ್‌ನಿಂದಾಗಿ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಸುಮಾರು ೪೦೦ ಕೋಟಿಗಳಷ್ಟು ನಷ್ಟ ಉಂಟಾಗಿದೆ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ತಿಳಿಸಿದ್ದಾರೆ. ಬಂದ್‌ಗೆ ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕಾ ವಲಯದ ಸುಮಾರು ಶೇ.೭೦ ರಷ್ಟು ಬೆಂಬಲ ನೀಡಿದ್ದಾರೆ. ಈ ಬಂದ್‌ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸುಮಾರು ೪೦೦ ಕೋಟಿ ರೂ. ಗಳಷ್ಟು ನಷ್ಟ ಆಗಿದೆ. ಆದರೂ, ಕರ್ನಾಟಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ದೃಷ್ಟಿಯಿಂದ ಮತ್ತು ನಾಡು, ನುಡಿ, ನೆಲ, ಜಲ, ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ನಾವೆಲ್ಲರೂ ನೀರನ್ನು ಸಂರಕ್ಷಿಸಬೇಕು ಮತ್ತು ಈ ಅವಧಿಯಲ್ಲಿ ಅದನ್ನು ನ್ಯಾಯಯುತವಾಗಿ ಬಳಸಬೇಕು. ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಬಗೆಹರಿಸಲು ಮಾತುಕತೆ ಮೂಲಕ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಿಗೆ ಎಫ್‌ಕೆಸಿಸಿಐ ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net