42 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ

25spt2
Published on

ಸೋಮವಾರಪೇಟೆ: ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಮೂಲಕ ಬಡ ಫಲಾನುಭವಿಗಳಿಗೆ ವಿತರಿಸಬೇಕಾದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಖಚಿತ ಮಾಹಿತಿ ಸಾರ್ವಜನಿಕರಿಂದ ಬಂದ ಮೇರೆಗೆ ಸೋಮವಾರಪೇಟೆ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಿ 42 ಕ್ವಿಂಟಾಲ್ ಅಕ್ಕಿಯನ್ನು ಪಟ್ಟಣದಲ್ಲಿ ಸೋಮವಾರ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.

ಕೊಣನೂರಿನ ಮೊಹಮ್ಮದ್ ಗೌಸ್ ಹಾಗೂ ಆತನ ಮಗ ಇದ್ರಿಸ್ ಬಂಧಿತ ಆರೋಪಿಗಳಾಗಿದ್ದು, ಅಕ್ಕಿಯನ್ನು ಖರೀದಿ ಮಾಡಿ ಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ತಿಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಆಹಾರ ನಿರೀಕ್ಷಕಿ ಯಶಸ್ವಿನಿ ತಿಳಿಸಿದ್ದಾರೆ. ದಾಳಿ ಸಂದರ್ಭ ಸೋಮವಾರಪೇಟೆ ಠಾಣಾ ಉಪನಿರೀಕ್ಷಕ ಗೋಪಾಲ್, ಗ್ರಾಮ ಆಡಳಿತಾಧಿಕಾರಿ ನಾಗೇಂದ್ರ, ಆಹಾರ ಇಲಾಖೆ ಕಚೇರಿ ಸಿಬ್ಬಂದಿ ವಿನೋದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net