

ಬೆಂಗಳೂರು: ರಾಜ್ಯದಲ್ಲಿ ಡೆಂಘೆ ಮಿತಿಮೀರಿ ಹರಡುತ್ತಿದ್ದು, 24 ಗಂಟೆಗಳಲ್ಲಿ 437 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ.
2,704 ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 165, ಮಂಡ್ಯ 47, ಬೆಳಗಾವಿ 32, ದಾವಣಗೆರೆ 24, ಕಲಬುರಗಿ 20, ಕೋಲಾರ 19, ಮೈಸೂರು 17, ಗದಗ 15, ರಾಮನಗರ 14, ಬೆಂ.ನಗರ, ಬೀದರ್, ಉಡುಪಿ ಮತ್ತು ಚಿಕ್ಕಮಗಳೂರು ತಲಾ 10 ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ. ಏಳು ಮಂದಿ ಮೃತಪಟ್ಟಿದ್ದಾರೆ. ಸೋಂಕಿತರಲ್ಲಿ 388 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.