

ಮೈಸೂರು: ನಗರದ ಮಾಸ್ಟರ್ ಅಥ್ಲೀಟ್ ಹಾಗೂ ಮೈಸೂರು ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಎಂ.ಯೋಗೇಂದ್ರ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಪಡೆದು ಗಮನ ಸೆಳೆದಿದ್ದಾರೆ.
ಪುಣೆಯ ಶ್ರೀ ಶಿವಛತ್ರಪತಿ ಸ್ಪೋಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 44ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಕ್ರೀಡಾಕೂಟದಲ್ಲಿ ಶನಿವಾರ 2000 ಮೀ. ಸ್ಟೀಪಲ್ ಚೇಸ್ ರನ್‌ನಲ್ಲಿ ಈ ಸಾಧನೆ ಮಾಡಿದ್ದಾರೆ.