

ಶನಿವಾರಸಂತೆ: ನಿಡ್ತ ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯನ್ನು ಶುಕ್ರವಾರ ಗ್ರಾ.ಪಂ. ಅಧ್ಯಕ್ಷ ಎಚ್.ಡಿ.ಮನು ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸೋಮವಾರಪೇಟೆ ತಾಲೂಕು ಲೆಕ್ಕ ಪರಿಶೋಧನಾಧಿಕಾರಿ ಅಬ್ದುಲ್ ಸಲಾಂ 2023-24ನೇ ಸಾಲಿನಲ್ಲಿ ನಿಡ್ತ ಗ್ರಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಮತ್ತು 15ನೇ ಹಣಕಾಸು ಯೋಜನೆಯಿಂದ ಆಗಿರುವ ಕಾಮಗಾರಿಗಳು ಮತ್ತು ಕಾಮಗಾರಿಗಳಿಗೆ ಖರ್ಚಾಗಿರುವ ಮೊತ್ತವನ್ನು ವರದಿ ಮೂಲಕ ಗ್ರಾಮಸ್ಥರ ಮುಂದಿಟ್ಟರು.
15ನೇ ಹಣಕಾಸು ಯೋಜನೆಯಲ್ಲಿ ಒಟ್ಟು 45 ಕಾಮಗಾರಿಗಳನ್ನು ನಡೆಸಲಾಗಿದ್ದು, ಇದಕ್ಕಾಗಿ 27,90,662 ರೂ. ವೆಚ್ಚ ಮಾಡಲಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯ ವಿವಿಧ ಕಾಮಗಾರಿಗಳಿಗೆ 10 ಲಕ್ಷ ರೂ ವಿನಿಯೋಗಿಸಲಾಗಿದೆ ಎಂದು ತಿಳಿಸಿದರು.
ಪಂಚಾತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಮತ್ತು ಸಭೆಯ ನೋಡಲ್ ಅಧಿಕಾರಿ ಪಿ.ವಿ. ಶ್ರೀನಿವಾಸ್ ಮಾತನಾಡಿದರು.
ಉದ್ಯೋಗ ಖಾತ್ರಿ ಯೋಜನೆಯ ಅಭಿಯಂತರ ಲೋಕೇಶ್, ಪಿಡಿಒ ಮಾನಸ, ಗ್ರಾ.ಪಂ.ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.