470 ವಿದ್ಯಾರ್ಥಿಗಳಿಗೆ 2 ಬಸ್ಸು

Published on

ಚಾಮರಾಜನಗರ: ನಗರದ ಹೊರ ವಲಯದಲ್ಲಿರುವ ಆದರ್ಶ ವಿದ್ಯಾಲಯಕ್ಕೆ ಸಮರ್ಪಕ ಬಸ್ ಸಂಪರ್ಕವಿಲ್ಲದೇ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ.

ಗುಂಡ್ಲುಪೇಟೆ ರಸ್ತೆಯಲ್ಲಿರುವ ಮೂಡ್ಲುಪುರದಿಂದ 3.5 ಕಿ.ಮೀ ದೂರದಲ್ಲಿ ಪ್ರಶಾಂತವಾದ ಪರಿಸರದಲ್ಲಿರುವ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಯಿಂದ ಎಸ್ಎಸ್ಎಲ್ ಸಿ ಶಿಕ್ಷಣ ಲಭ್ಯವಿದ್ದು, ಉತ್ತಮ ಶೈಕ್ಷಣಿಕ ಸಾಧನೆಯಿಂದ ಹೆಸರು ಗಳಿಸಿದೆ. 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿದೆ. ಪ್ರತಿ ವರ್ಷ ಇಲ್ಲಿಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚುತ್ತಿದೆ. ಅದರಂತೆ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 6-10 ನೇ ತರಗತಿಯವರೆಗೆ 475 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ತಾಲೂಕಿನ ವಿವಿಧ ಹೋಬಳಿಯ ನೂರಾರು ಗ್ರಾಮಗಳಿಂದ ಮಕ್ಕಳು ಆದರ್ಶ ವಿದ್ಯಾಲಯಕ್ಕೆ ವ್ಯಾಸಂಗಕ್ಕೆ ಬರುತ್ತಿದ್ದಾರೆ. ಆದರ್ಶ ವಿದ್ಯಾಲಯದಲ್ಲಿ ಉತ್ತಮವಾದ ಶೈಕ್ಷಣಿಕ ವಾತಾವರಣ ಉತ್ತಮವಾಗಿದ್ದರೂ, ಸಮರ್ಪಕ ರಸ್ತೆ, ಬಸ್‌ ಸೌಕರ್ಯ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ನಿತ್ಯವೂ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆದರ್ಶ ವಿದ್ಯಾಲಯಕ್ಕೆ ನಿತ್ಯವೂ ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ 3-4 ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಶನಿವಾರ ಕೇವಲ 2 ಬಸ್ ಗಳು ಮಾತ್ರ ಬರುವುದರಿಂದ ಸುಮಾರು 400 ಕ್ಕಿಂತಲೂ ಹೆಚ್ಚು ಮಕ್ಕಳು 2 ಬಸ್ ಗಳಲ್ಲಿ ಸಂಚರಿಸುವಂತಾಗಿದೆ. ಇದರಿಂದಾಗಿ ಆದರ್ಶ ವಿದ್ಯಾಲಯದ ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net