ಸಮಾಜ ವಿಜ್ಞಾನ ಪರೀಕ್ಷೆಗೆ 476 ವಿದ್ಯಾರ್ಥಿಗಳು ಗೈರು

29 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಾದ್ಯಂತ ಶನಿವಾರ ನಡೆದ ಸಮಾಜ ವಿಜ್ಞಾನ ಪರೀಕ್ಷೆಗೆ 103 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ ನೋಂದಾಯಿಸಿಕೊ0ಡಿದ್ದ 28,617 ವಿದ್ಯಾರ್ಥಿಗಳ ಪೈಕಿ 28,141 ವಿದ್ಯಾರ್ಥಿಗಳು ಹಾಜರಾಗಿದ್ದರು. ಯಾವುದೇ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಅಸ್ವಸ್ಥ:

ಕಲಘಟಗಿ ಪಟ್ಟಣದ ಜನತಾ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಸ್ಪಂದನಾ ಬೋಸ್ಲೆ ಎಂಬ ವಿದ್ಯಾರ್ಥಿನಿ ಎದೆನೋವಿನಿಂದ ಅಸ್ವಸ್ಥಳಾಗಿದ್ದಳು. ಕರ್ತವ್ಯದಲ್ಲಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು. ನಂತರ ಸಂಜನಾಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಸುದ್ದಿ ತಿಳಿದ ಜಿಲ್ಲಾಽಕಾರಿ ದಿವ್ಯ ಪ್ರಭು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net