ಪತ್ರಿಕೆ ವಿತರಕರ ರಾಜ್ಯಮಟ್ಟದ 4ನೇ ಸಮ್ಮೇಳನ ಸೆ. 8ರಂದು

28bkl2- STATE SAMMELANA
Published on

ಭಟ್ಕಳ: ಕರ್ನಾಟಕ ಪತ್ರಿಕೆ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ವಿತರಕರ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 8ರಂದು ಆಯೋಜಿಸಿರುವ ನಾಲ್ಕನೇ ರಾಜ್ಯ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಭಟ್ಕಳದ ವಿಜಯವಾಣಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಪತ್ರಿಕಾ ವಿತರಕರ 4ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ.


ನಾಡಿನ ಹಲವು ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಚಿವರು, ಸಂಸದರು, ಶಾಸಕರು ಪಾಲ್ಗೊಳ್ಳುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ದಿಕ್ಸೂಚಿ ಭಾಷಣ, ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ. ಶಂಭುಲಿಂಗ ಅಧ್ಯಕ್ಷತೆ ವಹಿಸುವರು. ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಿಕೆ ಹಂಚಿಕೆದಾರ ತಿಪ್ಪೇಸ್ವಾಮಿ ಸ್ವಾಗತ ಭಾಷಣ ಮಾಡಲಿದ್ದಾರೆ.


ಪತ್ರಿಕೆ ವಿತರಕರ ಒಕ್ಕೂಟ ಭಟ್ಕಳ ಘಟಕದ ತಾಲೂಕು ಅಧ್ಯಕ್ಷ ಹಾಗೂ ಜಿಲ್ಲಾ (ಕಾರವಾರ, ಉಡುಪಿ, ಮಂಗಳೂರು) ಸಂಘಟನಾ ಕಾರ್ಯದರ್ಶಿ ರಾಮಕೃಷ್ಣ ಭಟ್, ಮಂಜುನಾಥ ದೇವಾಡಿಗ, ವರದಿಗಾರ ರಾಮಚಂದ್ರ ಕಿಣಿ, ಉದ್ಯಮಿ ರಿತಿಕಾ ಕಿಣಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net