4ನೇ ದಿನವು ಮುಂದುವರಿದ ಪೌರ ನೌಕರರ ಮುಷ್ಕರ

28_HSN_01
filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.043437; highlight: 1; algolist: 0; multi-frame: 1; brp_mask: 8; brp_del_th: 0.0028,0.0000; brp_del_sen: 0.1500,0.0000; delta:null; module: photo;hw-remosaic: false;touch: (0.5671296, 0.4904485);sceneMode: 7864320;cct_value: 0;AI_Scene: (-1, -1);aec_lux: 129.0;aec_lux_index: 0;albedo: ;confidence: ;motionLevel: 0;weatherinfo: null;temperature: 33;zeissColor: bright;
Published on

ಹಾಸನ: ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರನೌಕರರು, ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ ನಗರ ಪಾಲಿಕೆ ಆವರಣದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ 4ನೇ ದಿನವೂ ಮುಂದುವರಿಯಿತು.

ಇದೆ ವೇಳೆ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ. ಯೋಗೇಶ್ ಮಾತನಾಡಿ, ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್‌ವೈಸರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರ ಕಾರ್ಮಿಕರನ್ನು ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ ವೇತನ, ನೌಕರರನ್ನು ಕಾಯಂ ಮಾಡುವುದು ಹಾಗೂ ಎಲ್ಲ ನೌಕರರಿಗೆ ಎಸ್‌ಎಫ್‌ಸಿ ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.

ರಂಜಾನ್ ಹಬ್ಬದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಭೆ ನಡೆಸಲು ದಿನಾಂಕ ನೀಡುವುದಾಗಿಯೂ ಸಹ ಭರವಸೆ ನೀಡಿದ್ದರು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಸ್ತುತ ಇಲ್ಲಿಯವರೆಗೂ ಚರ್ಚಿಸಲು ಆಹ್ವಾನಿಸಿಲ್ಲ. ನಗರದಲ್ಲಿ ರಾಜ್ಯ ಪರಿಷತ್‌ನ ಸರ್ವ ಸದಸ್ಯರ ಸಭೆಯನ್ನು ಕರೆದು ರಾಜ್ಯ ಪರಿಷತ್ ಸಭೆಯಲ್ಲಿ ತೀರ್ಮಾನಿಸಿದಂ ಸರ್ಕಾರಕ್ಕೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು 45 ದಿನಗಳ ಅನಿರ್ದಿಷ್ಟಾವಧಿ ಮುಷ್ಕರದ ನೋಟೀಸ್ ಸಹ ನೀಡಲಾಗಿತ್ತು. ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಶಾಖಾ ಅಧ್ಯಕ್ಷ ಎನ್.ಆರ್. ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಂಜನ್, ಖಜಾಂಚಿ ಎಚ್.ಜಿ. ರಾಮು ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net