4ರಂದು ಗೋವಿಂದ ಕಾರಜೋಳ ನಾಮಪತ್ರ

ctdd 0002
Published on

ಚಿತ್ರದುರ್ಗ:ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗ SC ಮೀಸಲು ಲೋಕಸಭಾ ಕ್ಷೇತ್ರಕ್ಕೆ ಏ.4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ,ಜನಾರ್ಧನರೆಡ್ಡಿ, ಶಾಸಕ ಎಂ.ಚಂದ್ರಪ್ಪ,ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್‌ಸದಸ್ಯರಾದ ಎನ್.ರವಿಕುಮಾರ, ಚಿದಾನಂದಗೌಡ,ಕೆ.ಎಸ್.ನ ವೀನ್ ಮತ್ತಿತರರು ಹಾಗೂ ಎರಡೂ ಪಕ್ಷಗಳು ಪ್ರಮುಖರು ಭಾಗವಹಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಬಳಿಕ ಅಲ್ಲಿಂದ ಕಾರ್ಯಕರ್ತರ ಬೃಹತ್ ಮೆರವಣಿಗೆಯಲ್ಲಿ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಕಾರ‌್ಯಾಲಯ(ಡಿಸಿ)ಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net