4ರಂದು ಡಾ.ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಗೆ ನಾಮಫಲಕ ಅಳವಡಿಕೆ

B.V. KARIGOWDA- press meet (2)
Published on

ಹಾಸನ: ನಗರದ ಸರ್ಕಾರಿ ಮಹಿಳಾ ಕಾಲೇಜು ಮುಂಭಾಗ ಜ. 4ರಂದು ಡಾ. ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಮತ್ತು ರಕ್ತದಾನ ಶಿಬಿರ ಹಾಗೂ ದೇಹದಾನ ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಕಲ್ಯಾಣ ರೀಸರ್ಚ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ಕರೀಗೌಡ ತಿಳಿಸಿದರು.

ಡಾ. ಗುರುರಾಜ ಹೆಬ್ಬಾರ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಜನಕಲ್ಯಾಣ ರಿಸರ್ಚ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಂಜೀವಿನಿ ಸಹಕಾರಿ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ. ರಾಷ್ಟ್ರೀಯ ಸೇವಾ ಯೋಜನೆ, ಹಿಮ್ಸ್, ಪರಿಪೂರ್ಣ ಚಾರಿಟಬಲ್ ಟ್ರಸ್ಟ್, ಕಾಮಧೇನು ಸಹಕಾರಿ ವಿದ್ಯಾಶ್ರಮ, ರೈತ ಬಂದು ಸಹಕಾರಿ ಸಂಘ, ವಿದ್ಯಾಸೌಧ ಶಿಕ್ಷಣ ಸಂಸ್ಥೆ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್, ಕಟ್ಟಾಯ ಹೋಬಳಿ ಗ್ರಾಮಸ್ಥರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ.ಗುರುರಾಜ ಹೆಬ್ಬಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಜ.4 ರಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರಿ ಮಹಿಳಾ ಕಾಲೇಜು ಮುಂಭಾಗದ ರಸ್ತೆಯಲ್ಲಿ ಡಾ.ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ 10:30ಕ್ಕೆ ಜನಕಲ್ಯಾಣ ರೀಸರ್ಚ್ ಚಾರಿಟೆಬಲ್ ಟ್ರಸ್ಟ್ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ದೇಹದಾನ-ನೇತ್ರದಾನ ನೊಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಉದ್ಘಾಟನೆ ಮಾಡಲಿದ್ದಾರೆ. ಸಂಸದ ಶ್ರೇಯಸ್ ಎಂ. ಪಟೇಲ್, ಶಾಸಕರು ಹಾಗೂ ಸಂಜೀವಿನಿ ಸಹಕಾರಿ ಆಸ್ಪತ್ರೆಯ ಅಧ್ಯಕ್ಷ ಎಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ. ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಎಸ್‌ಪಿ ಮೊಹಮ್ಮದ್ ಸುಜೀತಾ, ನಗರಸಭೆಯ ಪೌರಾಯುಕ್ತ ಟಿ.ಎನ್. ನರಸಿಂಹಮೂರ್ತಿ ಅವರು ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಡಾ. ಗುರುರಾಜ ಹೆಬ್ಬಾರ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್, ಅಧ್ಯಕ್ಷೆ ಡಾ. ಜಿ. ಪ್ರತಿಭಾ, ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಧ್ಯಕ್ಷ ಮಾಧವ್ ಶೆಣ್ಯೆ, ಡಾ. ವೈ.ಎಸ್. ವೀರಭದ್ರಪ್ಪ, ಪರಿಪೂರ್ಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಎಚ್.ವಿ. ಲಕ್ಷ್ಮೀನಾರಾಯಣ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net