ನತ್ಯಾಜ್ಯ ಟಕಕ್ಕೆ 5 ಎಕರೆ ಜಮೀನು!

FotoJet
Published on

ಖರೀದಿಗೆ ಮುಂದಾದ ಹುಳಿಯಾರು ಪಟ್ಟಣ ಪಂಚಾಯಿತಿ

ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ್ದು, ಪಟ್ಟಣದ ಸ್ವಚ್ಛತೆ ಹಾಗೂ ನತ್ಯಾಜ್ಯ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಆಡಳಿತ ಮಂಡಳಿ ಮುಂದಾಗಿದೆ. ಆದರೆ ಕಳೆದ ಕೆಲವು ವರ್ಷಗಳಿಂದ ನತ್ಯಾಜ್ಯ ವಸ್ತು ವಿಲೇವಾರಿ ಟಕ ನಿರ್ಮಿಸಲು ಸೂಕ್ತ ಸರ್ಕಾರಿ ಜಮೀನು ಲಭ್ಯವಾಗದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.

ಪಟ್ಟಣ ಪಂಚಾಯಿತಿಯಿಂದ ಹಲವು ಬಾರಿ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್​ ಅವರಿಗೆ ಮನವಿ ಮಾಡಿದರೂ ಗುರುತಿಸಿರುವ ಜಮೀನಿನಲ್ಲಿ ಹಲವು ಸಮಸ್ಯೆಗಳಿರುವುದರಿಂದ ಟಕ ನಿರ್ಮಾಣ ಪ್ರಕ್ರಿಯೆ ವಿಳಂಬವಾಗುತ್ತಿದೆ.

ಅ.8ರಂದು ಚಿಕ್ಕನಾಯಕನಹಳ್ಳಿ ತಹಸೀಲ್ದಾರ್​ ನೀಡಿದ ವರದಿಯಲ್ಲಿ ಹುಳಿಯಾರು ಹೋಬಳಿಯಲ್ಲಿ ಯಾವುದೇ ಸರ್ಕಾರಿ ಜಮೀನು ಲಭ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಟಕ ನಿರ್ಮಾಣಕ್ಕಾಗಿ ಹಿಡುವಳಿ(ಖರೀದಿ) ಮೂಲಕ ಖಾಸಗಿ ಜಮೀನು ಪಡೆಯಲು ಕ್ರಮವಹಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಳಿಯಾರು ಪಪಂ ಸುಮಾರು 5 ಎಕರೆ ಜಮೀನು ಖರೀದಿಸುವ ಯೋಜನೆ ರೂಪಿಸಿದ್ದು, ಅಗತ್ಯ ಪ್ರಕ್ರಿಯೆಯನ್ನು ನಿಯಮಾನುಸಾರ ಆರಂಭಿಸಿದೆ.

ಈ ಸಂಬಂಧವಾಗಿ ಆಸಕ್ತಿಯುಳ್ಳ ಜಮೀನು ಮಾಲೀಕರು ತಮ್ಮ ಜಮೀನಿನ ದಾಖಲೆಗಳೊಂದಿಗೆ ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿಗೆ 15 ದಿನಗಳ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪಟ್ಟಣ ಪಂಚಾಯಿತಿ ಅಧ್ಯೆ ರತ್ನಮ್ಮ, ಉಪಾಧ್ಯೆ ಕಾವ್ಯರಾಣಿ ಹಾಗೂ ಮುಖ್ಯಾಧಿಕಾರಿ ಮಂಜುನಾಥ್​ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು, ಹುಳಿಯಾರು ಪಟ್ಟಣದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಈ ಯೋಜನೆ ಅತ್ಯಂತ ಅಗತ್ಯವಾಗಿದೆ. ಪಟ್ಟಣದ ಅಭಿವೃದ್ಧಿಯಲ್ಲಿ ಸ್ಥಳಿಯರು ಅಗತ್ಯ ಸ್ಥಳ ನೀಡುವ ಮೂಲಕ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.

ಪಟ್ಟಣ ಪಂಚಾಯಿತಿ ಕಚೇರಿಯು ಈ ಯೋಜನೆಯ ಮೂಲಕ ಪಟ್ಟಣದಲ್ಲಿ ನತ್ಯಾಜ್ಯ ಸಂಗ್ರಹ, ವಿಂಗಡಣೆ ಹಾಗೂ ಸಂಸ್ಕರಣಾ ಟಕವನ್ನು ನಿರ್ಮಿಸುವ ಉದ್ದೇಶ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net