ಉಡುಪಿಯಲ್ಲಿ ಬಾಲಕ ಸಹಿತ ಐವರಲ್ಲಿ ಕರೊನಾ ಪಾಸಿಟಿವ್

carona logo
Published on

ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಐದು ಕರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ ನಾಲ್ವರು ಮತ್ತು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಯುವತಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಬಂದವರಲ್ಲಿ 8 ವರ್ಷದ ಬಾಲಕ, 24 ವರ್ಷದ ಗರ್ಭಿಣಿ, ಓರ್ವ ಪುರುಷನಲ್ಲಿ ಕರೊನಾ ಪಾಸಿಟಿವ್ ಪತ್ತೆಯಾಗಿದೆ. ಮೇ.16 ರಂದು ಚಿತ್ರದುರ್ಗದಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ದಾಖಲಾಗಿದ್ದ ಯುವತಿಗೆ ಕರೊನಾ ದೃಢಪಟ್ಟಿದೆ. ಐವರನ್ನು ಕೋವಿಡ್ 19 ವಿಶೇಷ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರೊನಾ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ 16ಕ್ಕೇರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net