ರಾಯಬಾಗದಲ್ಲಿ ಸರಣಿಗಳ್ಳತನ

0101
Published on

ರಾಯಬಾಗ: ಪಟ್ಟಣದ ಚಿಂಚಲಿ ರಸ್ತೆಯಲ್ಲಿ ಭಾನುವಾರ ಬೆಳಗಿನ ಜಾವ 5 ಮನೆಗಳ ಬೀಗ ಮುರಿದು ಕಳ್ಳತನ ಮಾಡಿ ಎರಡು ಬೈಕ್, ನಗದು ಬಂಗಾರದ ಆಭರಣ ದೋಚಿ ಪರಾರಿಯಾಗಿದ್ದಾರೆ.

ಮನೆಗಳ ಮಾಲೀಕರು ಬೀಗ ಹಾಕಿ ಪರ ಊರಿಗೆ ಹೋಗಿದ್ದನ್ನು ಖಚಿತಪಡಿಸಿಕೊಂಡ ಕಳ್ಳರು, ಬೀಗ ಒಡೆದು ಟ್ರೇಜರಿಯಲ್ಲಿನ ಬಟ್ಟೆ ಚೆಲ್ಲಾಪಿಲ್ಲಿ ಮಾಡಿ, ಹಣ ಮತ್ತು ಬಂಗಾರದ ಆಭರಣ ದೋಚಿಕೊಂಡು ಹೋಗಿದ್ದಾರೆ. ಮನೆಗಳ ಹೊರಗೆ ನಿಲ್ಲಿಸಿದ್ದ ಎರಡು ಬೈಕ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ. ಮನೆ ಮಾಲೀಕರು ಊರಿನಲ್ಲಿ ಇಲ್ಲದ ಕಾರಣ ಎಷ್ಟು ಹಣ, ಬಂಗಾರ ಕಳ್ಳತನವಾಗಿದೆ ಎಂದು ತಿಳಿದು ಬಂದಿಲ್ಲ. ಬೀಗ ಮುರಿದದ್ದನ್ನು ಅಕ್ಕಪಕ್ಕದ ಜನರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಕೆ.ಎಸ್. ಹಟ್ಟಿ, ಪಿಎಸ್‌ಐ ಗಜಾನನ ನಾಯಿಕ ಸ್ಥಳ ಪರೀಶಿಲನೆ ನಡೆಸಿ, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಿ ತಪಾಸಣೆ ನಡೆಸಿದರು. ಕಳ್ಳರ ಪತ್ತೆಗಾಗಿ ತಂಡ ರಚಿಸಲಾಗಿದೆ ಎಂದು ತಿಳಿಸಿದರು. ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಪೊಲೀಸ್ ಠಾಣೆಗೆ ತಿಳಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net