ಜೀಪ್​-ಲಾರಿ ನಡುವೆ ಡಿಕ್ಕಿ; ಕರ್ನಾಟಕ ಮೂಲದ ಐವರು ಮೃತ್ಯು, 11ಮಂದಿ ಗಂಭೀರ

jeep Truck Accident
Published on

ಅಮರಾವತಿ: ಜೀಪ್​-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಮೃತಪಟ್ಟು, 11ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ.

ಶುಕ್ರವಾರ ನಸುಕಿನ ಜಾವ ಘಟನೆ ನಡೆದಿದ್ದು, ಈ ಪೈಕಿ ಏಖು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

jeep Truck Accident

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೆಥಂಪಲ್ಲಿ ಪೊಲೀಸ್​ ಠಾಣಾಧಿಕಾರಿ ನಾಗಬಾಬು ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದು, ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಿರುಪತಿಯ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೊಲೆರೋ ವಾಹನದಲ್ಲಿ ಒಟ್ಟು 16 ಮಂದಿ ಪ್ರಯಾಣಿಕರಿದ್ದರು. ಅಪಘಾತಕ್ಕೀಡಾದವರು ಬೆಳಗಾವಿ ಮೂಲದವರು ಎಂದು ತಿಳಿದು ಬಂದಿದ್ದು, ತಿರುಪತಿಗೆ ತೆರಳಿ ತಮ್ಮ ಉರಿಗೆ ವಾಪಸ್​ ಆಗುತ್ತಿದ್ದರು. ಚಿತ್ತೂರಿನಿಂದ ಕಡಪಾದತ್ತ ಲಾರಿ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮೆಥಂಪಲ್ಲಿ ಪೊಲೀಸ್​ ಠಾಣಾಧಿಕಾರಿ ನಾಗಬಾಬು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net