ರೈತನ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

11HNL2
Published on

ವಿಜಯವಾಣಿ ಸುದ್ದಿಜಾಲ ಹಾನಗಲ್ಲ

ವರದಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದ ಹಾನಗಲ್ಲ ತಾಲೂಕಿನ ಇನಾಂಲಕಮಾಪುರ ಗ್ರಾಮದ ರೈತ ಚಂದ್ರಪ್ಪ ದಳವಾಯಿ ಅವರ ಕುಟುಂಬದ ಸದಸ್ಯರಿಗೆ ಸರ್ಕಾರದಿಂದ ಮಂಜೂರಾದ 5 ಲಕ್ಷ ರೂ. ಪರಿಹಾರ ಚೆಕ್ ಅನ್ನು ಸಂಸದ ಶಿವಕುಮಾರ ಉದಾಸಿ ವಿತರಿಸಿ, ಸಾಂತ್ವನ ಹೇಳಿದರು.

ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯ 1 ಲಕ್ಷ ರೂ. ಸೇರಿ ಒಟ್ಟು 5 ಲಕ್ಷ ರೂ. ಪರಿಹಾರದ ಚೆಕ್​ನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಉಪಸ್ಥಿತಿಯಲ್ಲಿ ವಿತರಿಸಲಾಯಿತು. ಸವಣೂರು ಎಸಿ ಅನ್ನಪೂರ್ಣ ಮುದುಕಮ್ಮನವರ, ತಹಸೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ, ಸಿಪಿಐ ಶಿವಶಂಕರ ಗಣಾಚಾರಿ, ತಾಪಂ ಸದಸ್ಯ ಬಸವರಾಜ ಬೂದಿಹಾಳ, ನಿಂಗಪ್ಪ ಗೊಬ್ಬೇರ, ಶಿವಲಿಂಗಪ್ಪ ತಲ್ಲೂರ, ಸಿದ್ದಲಿಂಗಪ್ಪ ಶಂಕ್ರಿಕೊಪ್ಪ, ರಾಜಣ್ಣ ಪಟ್ಟಣದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net