

ರಾವಂದೂರು: ದಾಖಲೆ ಇಲ್ಲದ 5 ಲಕ್ಷ ರೂ. ನಗದನ್ನು ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದ ಚಂದ್ರಶೇಖರ್ ಅವರ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೆಸ್ತೂರಿನಿಂದ ಆವರ್ತಿ ಗ್ರಾಮಕ್ಕೆ ಬರುವಾಗ ಚೆಕ್‌ಪೋಸ್ಟ್‌ನಲ್ಲಿ ಕಾರಿನ ತಪಾಸಣೆ ನಡೆಸಿದಾಗ 5 ಲಕ್ಷ ರೂ. ನಗದು ಪತ್ತೆಯಾಗಿದೆ. ಸಬ್‌ಇನ್‌ಸ್ಪೆಕ್ಟರ್ ಅಚ್ಚಮ್ಮ, ಹೆಡ್ ಕಾನ್‌ಸ್ಟೆಬಲ್ ಕುಮಾರ್, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಚ್.ಎಚ್.ಮಹದೇವ, ಫ್ಲೈಯಿಂಗ್ ಸ್ಕ್ವ್ಯಾಡ್ ಚಂದ್ರೇಗೌಡ, ರವೀಂದ್ರ ಇತರರು ಇದ್ದರು.