

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಪೂರ್ಣ ಪ್ರಮಾಣದಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿ ಮೇಲೆ ಶೇ. 5ರಷ್ಟು ರಿಯಾಯಿತಿಯನ್ನು ಸೆಪ್ಟೆಂಬರ್ 14ರವರೆಗೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ತಿಳಿಸಿದೆ.
ಈ ಹಿಂದೆ ಜುಲೈ 31ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಪೌರಾಡಳಿತ ನಿರ್ದೇಶನಾಲಯದ ಕೋರಿಕೆ ಮೇರೆಗೆ ನಗರಾಭಿವೃದ್ಧಿ ಇಲಾಖೆ ಸೆ. 14ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.