

ವಿರಾಜಪೇಟೆ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಘಟಕ ಹುಬ್ಬಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಮತ್ತು ನೆಲಮಂಗಲ ತಾಲೂಕು ಘಟಕದ ಆಶ್ರಯದಲ್ಲಿ ಶ್ರೀ ಬಸವಣ್ಣ ದೇವರ ಮಠದ ಸಭಾಂಗಣದಲ್ಲಿ ಶನಿವಾರ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ಜಿಲ್ಲೆಯ ಐದು ಶಿಕ್ಷಕರುಗಳಿಗೆ ರಾಜ್ಯಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಬೇಟೋಳಿ ಸಹಿಪ್ರಾಶಾಲೆ ಮುಖ್ಯ ಶಿಕ್ಷಕಿ ಎಚ್.ಜೆ. ಸೀತಾ, ಅಮ್ಮತ್ತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಿರಿಯ ಮುಖ್ಯ ಶಿಕ್ಷಕಿ ಸೋಮಕ್ಕ, ಗ್ಲೇಲೋರ್ನ ಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಮೀನಾಕ್ಷಿ , ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕಿ ಜಾಕ್ಸಿನ್, ಹಾಲುಗುಂದ ಸ.ಹಿ.ಪ್ರಾ ಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಭವಾನಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೊಡಗು ಜಿಲ್ಲಾ ಗ್ರಾಮೀಣ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷೆ ಕಮಲಮ್ಮ ಇದ್ದರು.