ಆಹಾರಧಾನ್ಯಗಳ ಮೇಲೆ ತೆರಿಗೆ ವಿಧಿಸಿರುವುದು ಸರಿಯಲ್ಲ

DSC_7115
ಆಹಾರ ಧಾನ್ಯ, ದ್ವಿದಳ ಧಾನ್ಯಗಳ ಮೇಲೆ ಶೇ.5ರ ತೆರಿಗೆ ವಿಧಿಸುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ವಿಜಯಪುರ ಎಪಿಎಂಸಿ ವರ್ತಕರು ಶನಿವಾರ ವ್ಯಾಪಾರ, ವಹಿವಾಟು ಬಂದ್ ಮಾಡಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Published on

ವಿಜಯಪುರ: ಆಹಾರ ಧಾನ್ಯ, ದ್ವಿದಳ ಧಾನ್ಯಗಳ ಮೇಲೆ ಶೇ.5ರ ತೆರಿಗೆ ವಿಧಿಸುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ವಿಜಯಪುರ ಎಪಿಎಂಸಿ ವರ್ತಕರು ಶನಿವಾರ ವ್ಯಾಪಾರ, ವಹಿವಾಟು ಬಂದ್ ಮಾಡಿ ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರವೀಂದ್ರ ಎಸ್ ಬಿಜ್ಜರಗಿ ಮಾತನಾಡಿ, ಕೇಂದ್ರ ಸರ್ಕಾರವೂ ಇತ್ತೀಚಿಗೆ ಜರುಗಿದ ರಾಷ್ಟ್ರಮಟ್ಟದ 47ನೇ ಜಿಎಸ್‌ಟಿ ಕೌನ್ಸ್ಸೆಲಿಂಗ್ ಕಮಿಟಿ ಸಭೆಯಲ್ಲಿ ಶೇ.5 ರಷ್ಟು ಜಿಎಸ್‌ಟಿ ತೆರಿಗೆ ವಿಧಿಸುವುದರಿಂದ ರೈತರಿಗೆ, ವರ್ತಕರಿಗೆ, ಜನ ಸಾಮಾನ್ಯರಿಗೆ, ಬಡ ಕೂಲಿಕಾರ್ಮಿಕರಿಗೆ ಹೊರೆಯಾಗುತ್ತದೆ. ಆದ್ದರಿಂದ ಕೈಗೊಂಡಿರುವ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ಭೀಮಶಿ ಕಲಾದಗಿ, ತೆರಿಗೆ ಸಲಹೆಗಾರರ ಅಧ್ಯಕ್ಷ ರಾಜಶೇಖರ ಪಾಟೀಲ, ಕಿರಣಾ ಬಜಾರ ವ್ಯಾಪಾರಸ್ಥ ಅಧ್ಯಕ್ಷ ಲಾಲು ಶೇಠ, ಜವಳಿ ವರ್ತಕರ ಸಂಘದ ಅಧ್ಯಕ್ಷ ಗೋಕುಲ ಮಹೀಂದ್ರಕರ, ಮುಖಂಡರಾದ ಜಯಾನಂದ ತಾಳಿಕೋಟಿ, ರಮೇಶ ನಿಡೋಣಿ, ನಿಲೇಶ ಶಹಾ, ಪ್ರವೀಣ ವಾರದ, ಸಿದ್ದಪ್ಪ ಸಜ್ಜನ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net