

ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅಧ್ಯತೆಯಲ್ಲಿ ನಡೆದ ಭಾರತೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಡಿ. 27 ರಂದು ಬೆಳಗಾವಿ ನಗರದಲ್ಲಿ ನಡೆಯಲಿರುವ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಬಬಲೇಶ್ವರ ವಿಧಾನಸಭಾ ೇತ್ರದ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ರೈತರು ಭಾಗವಹಿಸಲಿದ್ದಾರೆ.
ಬೆಳಗಾವಿಯ ಕ್ಲಬ್ ರಸ್ತೆಯ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳ ಪ್ರತಿ ಗ್ರಾಮದಿಂದ ಯುವಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಕೋಟಾ&ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯ ಸಿದ್ದು ಗೌಡನವರ ಹಾಗೂ ಈರಗೊಂಡ ಬಿರಾದಾರ ತಿಳಿಸಿದ್ದಾರೆ.