ಅತ್ಯಾಚಾರಿಗೆ 5 ವರ್ಷ ಕಠಿಣ ಶಿಕ್ಷೆ

COURT
Published on

ಚಿತ್ರದುರ್ಗ: ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹೊಸದುರ್ಗ ತಾಲೂಕಿನ ಪಾಣಿಕಿಟ್ಟದಹಳ್ಳಿಯ ಮೂಡ್ಲಪ್ಪನಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಚಿತ್ರದುರ್ಗ ವಿವೇಕಾನಂದ ನಗರದಿಂದ ಬಟ್ಟೆ ತೊಳೆಯುವ ನೆಪವೊಡ್ಡಿ ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ತನಿಖೆ ಪೂರ್ಣಗೊಳಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ಮತ್ತು ದಂಡ ವಿಧಿಸಿದ್ದು, ನೊಂದ ಬಾಲಕಿಗೆ 25 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್.ಜಗದೀಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net