5 ಪದಕಗಳನ್ನು ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಂಗಾಡುಮನೆ ವಸಂತಿ

Bangadumane Vasanthi won 5 medals and was selected for the state level
Published on

ಮಡಿಕೇರಿ:

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಡಿಕೇರಿಯ ಬಂಗಾಡುಮನೆ ವಸಂತಿ ಅವರು ಐದು ಪದಕಗಳನ್ನು ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಉದ್ದ ಜಿಗಿತದಲ್ಲಿ ಚಿನ್ನದ ಪದಕ, 200ಮೀ ಓಟದಲ್ಲಿ ಬೆಳ್ಳಿ ಪದಕ, 400*4 ರಿಲೆಯಲ್ಲಿ ಕಂಚಿನ ಪದಕ, ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಮತ್ತು ಲಯಬದ್ಧ ಜೋಡಿ ಯೋಗಾಸನದಲ್ಲಿ ಬೆಳ್ಳಿ ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ಇಲ್ಲಿಯವರೆಗೆ ಅನೇಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ದಾಖಲೆ ಸಂಖ್ಯೆಯ ಪದಕಗಳನ್ನು ಗೆದ್ದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net