ವಿಜಯವಾಣಿ ಸುದ್ದಿಜಾಲ ಚಿಂತಾಮಣಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಸಿಪಿಸಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಹಾಗೂ ಪೂರಕ ಕಟ್ಟಡಗಳ ನಿಮಾರ್ಣಕ್ಕೆ <70 ಕೋಟಿ ಅಂದಾಜು ಮೊತ್ತ ಹಾಗೂ ಚಿಂತಾಮಣಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಕಟ್ಟಡ ನವೀಕರಣ ಮತ್ತು ಅಡಿಟೋರಿಯಂಗೆ 50 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಿದೆ.
ನಗರದ ಸರ್ಕಾರಿ ಪಾಲಿಟೆಕ್ನಿಕ್ ಬಹುತೇಕ ಕಟ್ಟಡ ಶಿಥಿಲಗೊಂಡಿದ್ದವು. ಕಟ್ಟಡಕ್ಕೆ 75 ವರ್ಷ ತುಂಬಿದ ಹಿನ್ನೆಲೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ 15 ಕೋಟಿ ರೂ.ವೆಚ್ಚದಲ್ಲಿ ವಿವಿಧ ಕಟ್ಟಡ ಕಾಮಗಾರಿಗೆ ಕಳೆದ ಅ.26ರಂದು ಭೂಮಿ ಪೂಜೆ ನೆರವೇರಿಸಿದ್ದು ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ.