ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ

Published on

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಲೋಕ ಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು. ತರಬೇತಿಯು ನಿತ್ಯ ಬೆಳಗ್ಗೆ 10ರಿಂದ ಸಂಖ್ಯೆ 4.30ರ ವರೆಗೆ ಇರಲಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ 0821-2515944 ಅನ್ನು ಸಂಪರ್ಕಿಸಬಹುದು ಎಂದು ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net