ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾದ ವಿವಿಧ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ 50 ದಿನಗಳ ತರಬೇತಿ ನೀಡಲಾಗುವುದು. ಆಸಕ್ತರು ಅ.10ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ತಮ್ಮ ಹೆಸರನ್ನು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಲು ಮುಕ್ತ ವಿವಿ ಕುಲಸಚಿವ ಪ್ರೊ.ಎಸ್.ಕೆ. ನವೀನ್‌ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.