ಡೀಮ್ಡ್ ಅರಣ್ಯ ವಾ ್ಯಪ್ತಿಗೆ 50 ಸಾವಿರ ಎಕರೆ

ಚಿಂತಾಮಣಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಅಹವಾಲು ಆಲಿಸಿದರು. ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಪಂ ಸಿಇಒ ಪ್ರಕಾಶ್ ನಿಟ್ಟಾಲಿ, ಉಪವಿಭಾಗಾಧಿಕಾರಿ ಅಶ್ವಿನ್ ಮತ್ತಿತರರು ಇದ್ದರು.
5cmy 11
ಚಿಂತಾಮಣಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಅಹವಾಲು ಆಲಿಸಿದರು. ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಪಂ ಸಿಇಒ ಪ್ರಕಾಶ್ ನಿಟ್ಟಾಲಿ, ಉಪವಿಭಾಗಾಧಿಕಾರಿ ಅಶ್ವಿನ್ ಮತ್ತಿತರರು ಇದ್ದರು.
Published on

ಬಿಡುಗಡೆಗೆ ಕೋರಿ ಸುಪ್ರೀಂಕೋರ್ಟ್‌ಗೆ ಪ್ರಸ್ತಾವನೆ ಸಚಿವ.ಡಾ.ಎಂ.ಸಿ.ಸುಧಾಕರ್ ಮಾಹಿತಿ



ಚಿಂತಾಮಣಿ: ಜಿಲ್ಲೆಯಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಸುಮಾರು 50 ಸಾವಿರ ಎಕರೆ ಕೆರೆ- ಕುಂಟೆ, ರೈತರ ಜಮೀನು ಡೀಮ್ಡ್ ಅರಣ್ಯಕ್ಕೆ ಸೇರ್ಪಡೆಯಾಗಿದ್ದು, ಈ ಜಾಗವನ್ನು ಈ ವ್ಯಾಪ್ತಿಯಿಂದ ಬಿಡುಗಡೆಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನ ಮಸ್ತೇನಹಳ್ಳಿ 2ನೇ ಹಂತದ ಕೈಗಾರಿಕಾ ಪ್ರದೇಶಾಭಿವೃದ್ಧಿ ಯೋಜನೆ ಕುರಿತು ಅಧಿಕಾರಿಗಳು ಮತ್ತು ಸ್ಥಳೀಯ ರೈತರೊಂದಿಗೆ ಬುಧವಾರ ಕರೆದಿದ್ದ ಸಭೆಯಲ್ಲಿ ಮಾತನಾಡಿದರು.
ತಾಲೂಕಿನ ಮಾರಪ್ಪಲ್ಲಿ ಗ್ರಾಮದಲ್ಲಿ 15 ರೈತರ ಜಮೀನುಗಳನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿದ್ದು, ಪರಿಹಾರ ಪಡೆಯದ ಕಾರಣ ಒಂದು ಎಕರೆಗೆ 10 ಗುಂಟೆಯಂತೆ ಬದಲಿ ಜಮೀನು ನೀಡಲಾಗಿತ್ತು. ಆ ಜಮೀನು ಸಹ ಡೀಮ್ಡ್ ಫಾರೆಸ್ಟ್‌ಗೆ ಸೇರಿಸಲಾಗಿದೆ. ಬದಲಿ ಜಮೀನು ನೀಡುವವರೆಗೂ ಜಮೀನು ಸ್ವಾಧೀನ ಪಡಿಸಿಕೊಳ್ಳಲು ಬಿಡುವುದಿಲ್ಲ ಎಂದು ರೈತರು ಮನವಿ ಸಲ್ಲಿಸಿದರು.
ಅಧಿಕಾರಿಗಳು ಸಾಕಷ್ಟು ಅಳೆದು-ತೂಗಿ ಜಮೀನು ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಕೆಐಎಡಿಬಿಗೆ ಸೇರಿರುವ ಜಮೀನುಗಳನ್ನು ಕಾರ್ಖಾನೆಗಳಿಗೆ ಬಿಟ್ಟುಕೊಟ್ಟರೆ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ಕೈಗಾರಿಕೆಗಳ ಸ್ಥಾಪನೆಯಿಂದ ರೈತರ ಮಕ್ಕಳಿಗೆ ಉದ್ಯೋಗಾವಕಾಶ ದೊರೆಯುತ್ತವೆ. ಒಂದು ವರ್ಷದಿಂದ ಸಮೀಕ್ಷೆ ನಡೆಸಿ ಎಲ್ಲ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ಅಪೀಲು ಸಲ್ಲಿಸಲಾಗುವುದು. ನಂತರ ರೈತರಿಗೆ ಬರಬೇಕಾದ ಜಮೀನು ಕೊಡಿಸುವುದಾಗಿ ಸಚಿವರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಡಾ.ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರಕಾಶ್ ನಿಟ್ಟಾಲಿ, ಉಪವಿಭಾಗಾಧಿಕಾರಿ ಅಶ್ವಿನ್, ತಹಸೀಲ್ದಾರ್ ಸುದರ್ಶನ ಯಾದವ್,
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಕೈಗಾರಿಕಾ ವಿಸ್ತರಣಾಧಿಕಾರಿ ಶ್ರೀನಿವಾಸರೆಡ್ಡಿ, ಸಚಿವರ ಆಪ್ತ ಸಹಾಯಕರಾದ ಜಿಲ್ಲಾ ಮೀನುಗಾರಿಕೆ
ಇಲಾಖೆಯ ನಾಗೇಂದ್ರಪ್ರಸಾದ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ರೈತರಿಗೆ ಭರವಸೆ
ಒಂದು ಮತ್ತು 2ನೇ ಹಂತದಲ್ಲಿ ಜಮೀನು ನೀಡಿರುವ ರೈತರ ಸಮಸ್ಯೆ ಆಲಿಸಿದ ಸಚಿವರು ಕಾನೂನು ಬದ್ಧವಾಗಿ ರೈತರು ಅನುಭವದಲ್ಲಿರುವ ಜಮೀನಿಗೆ ಹಣ ಕೊಡಿಸುವ ಜವಾಬ್ದಾರಿ ವಹಿಸಿಕೊಳ್ಳುತ್ತೇನೆ. ವಿಸ್ತೀರ್ಣದಲ್ಲಿ ವ್ಯತ್ಯಾಸಗಳು ಇದ್ದಲ್ಲಿ ರೈತರ ಒಪ್ಪಿಗೆ ಪಡೆದು ಸರಿಪಡಿಸಿ ಸಮಸ್ಯೆ ಬಗೆಹರಿಸಿಕೊಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಭೂಸ್ವಾಧೀನದಲ್ಲಿ ಲೋಪದೋಷ
ಭೂಸ್ವಾಧೀನದಲ್ಲಿ ಕೆಲವು ಲೋಪದೋಷಗಳಾಗಿವೆ. ರೈತರಿಗೆ ನೀಡಲಾಗಿರುವ ಪರಿಹಾರದ ಹಣ ಕಡಿಮೆ ಎಂದು ದೂರಿದ್ದರಿಂದ, ಪರಿಶೀಲನೆ ನಡೆಸಿ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕೆಲಸ ಮಾಡಬಹುದಾಗಿತ್ತು. ಒಂದನೇ ಹಂತದಲ್ಲಿ ಎಕರೆಗೆ 25 ಲಕ್ಷ ರೂ. ನಿಗದಿಪಡಿಸಲಾಗಿತ್ತು. ಜಮೀನು ಫಲವತ್ತತೆಯಿಂದ ಕೂಡಿದ್ದು ನೀಡುವ ಪರಿಹಾರ ಸಾಲದು ಎಂದು ಮನವಿ ಮಾಡಿದ್ದರಿಂದ 2ನೇ ಹಂತದಲ್ಲಿ 35 ಲಕ್ಷ ರೂ.ಗಳಿಗೆ ಏರಿಕೆಯಾಯಿತು ಎಂದು ಡಾ. ಎಂ.ಸಿ. ಸುಧಾಕರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net