50 ಲಕ್ಷ ರೂ. ಪರಿಹಾರಕ್ಕೆ ಒತ್ತಾಯ

Manjunath
Published on

ಚಿತ್ರದುರ್ಗ: ಕಂದಾಯ ಇಲಾಖೆ ನೌಕರ ಗುರುಲಿಂಗಪ್ಪ ಒತ್ತಡದ ಕೆಲಸದಿಂದಾಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಕೂಡಲೇ 50 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಚಿತ್ರದುರ್ಗ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಮಂಜುನಾಥ್ ಒತ್ತಾಯಿಸಿದ್ದಾರೆ.

ಇಲಾಖೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳದೆ, ಹೆಚ್ಚುವರಿ ಕಾರ್ಯಭಾರವನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ಮೇಲಾಧಿಕಾರಿಗಳು, ಜನಪ್ರತಿನಿಧಿಗಳು ಒತ್ತಡ ಏರುತ್ತಿದ್ದು, ಸಾರ್ವಜನಿಕರಿಗೆ ಸೇವೆ ಒದಗಿಸಲಾಗುತ್ತಿಲ್ಲ. ನಿತ್ಯ ಸಾರ್ವಜನಿಕರ ಆರೋಪ, ನಿಂದನೆ ಸಹಿಸಲಾಗದೆ ನೌಕರರು ನೊಂದು ಆತ್ಮಹತ್ಯೆಯ ದಾರಿ ಹಿಡಿಯುತ್ತಿರುವುದು ದುರಂತ ಎಂದು ಬೇಸರಿಸಿದ್ದಾರೆ.

ಸರ್ಕಾರದ ಭಾಗವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಶ್ರಮಿಸುತ್ತಿರುವ ಸರ್ಕಾರಿ ನೌಕರರ ಕಾರ್ಯಭಾರ ತಗ್ಗಿಸಲು ತ್ವರಿತವಾಗಿ ಇಲಾಖೆಗಳಲ್ಲಿ ಖಾಲಿ ಉಳಿದಿರುವ 2.59 ಲಕ್ಷ ಹುದ್ದೆ ಭರ್ತಿ ಮಾಡುವ ಮೂಲಕ ನೌಕರರ ಹಿತ ಕಾಪಾಡಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net