50 ಸಾವಿರ ಸಸಿ ನೆಡುವ ಗುರಿ

21CKD-Web
ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಡಾ.ಶ್ಯಾಮಾಪ್ರಸಾದ ಮುಖರ್ಜಿ ಅವರ ಜನ್ಮದಿನ ನಿಮಿತ್ತ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕ ಡಿ.ಎಂ.ಐಹೊಳೆ ಚಾಲನೆ ನೀಡಿದರು. ಪವನ ಕತ್ತಿ, ಸುರೇಶ ಬೆಲ್ಲದ, ರಾಜು ಹರಗಣ್ಣವರ ಇತರರು ಇದ್ದರು.
Published on

ಚಿಕ್ಕೋಡಿ: ರಾಯಬಾಗ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಬರುವ ಚಿಕ್ಕೋಡಿ ತಾಲೂಕಿನ ಹಳ್ಳಿಗಳಲ್ಲಿ 50 ಸಾವಿರಕ್ಕೂ ಹೆಚ್ಚಿನ ಸಸಿ ನೆಡುವ ಗುರಿ ಹೊಂದಲಾಗಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು. ರಾಯಬಾಗ ವಿಧಾನಸಭೆ ಕ್ಷೇತ್ರದ ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಡಾ.ಶ್ಯಾಮಾಪ್ರಸಾದ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯಕರ ಬದುಕು ನಡೆಸಲು ಉತ್ತಮ ಜೀವನ ಶೈಲಿಯೊಂದಿಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ಅಗತ್ಯ. ಅದಕ್ಕಾಗಿ ನಾವು ಗಿಡಗಳನ್ನು ಹೆಚ್ಚಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆ ಎಂಬುದು ಸರ್ಕಾರದ ಕೆಲಸವಷ್ಟೇ ಅಲ್ಲ. ನಮ್ಮ ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ ಎಂದರು.

ಜಿಪಂ ಸದಸ್ಯ ಪವನ ಕತ್ತಿ ಮಾತನಾಡಿ, ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಅಗತ್ಯವಿದೆ. ಸಸಿ ನೆಡುವುದರ ಜತೆಗೆ ಪಾಲನೆ-ಪೋಷಣೆಯೂ ನಡೆದಾಗ ಪರಿಸರ ಉಳಿಸುವುದು ಸಾಧ್ಯವಾಗುತ್ತದೆ. ಇದರಿಂದ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಕಬ್ಬೂರ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹಿರಾಶುಗರ್ ನಿರ್ದೇಶಕ ಸುರೇಶ ಬೆಲ್ಲದ, ಸದಾನಂದ ಹಳಿಂಗಳೆ, ರಾಜು ಹರಗಣ್ಣವರ, ಮನೋಜ ಮನಗೂಳಿ, ರಮೇಶ ಕಾಳಣ್ಣವರ, ವಿರೂಪಾಕ್ಷಿ ಈಟಿ, ಸದಾಶಿವ ಹಂಜ್ಯಾಗೋಳ, ಐ.ಆರ್.ಖಡಕೋಳ, ವಿಶ್ವನಾಥ ಸೊಗಲದ, ಮಹಾಂತೇಶ ನಾಶಿಪುಡಿ, ಎಂ.ಜಿ.ನಿರ್ವಾಣಿ, ಬಿ.ಎಸ್.ಕಾಡೇಶಗೋಳ, ಮಲ್ಲಪ್ಪ ಜೀವನಿ, ಶಿವಾನಂದ ಮಠದ, ಡಿ.ಬಿ.ಡಕ್ಕಣ್ಣವರ ಉಪಸ್ಥಿತರಿದ್ದರು. ಮಹಾನಿಂಗ ಹಂಜಿ ಸ್ವಾಗತಿಸಿ, ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net