

ಮಂಗಳೂರು/ಉಡುಪಿ: ಕೋವಿಡ್ 19 ಸುರಕ್ಷಾ ಕ್ರಮ ಪಾಲಿಸದ ಜನರ ವಿರುದ್ಧ ಪ್ರಕರಣ ದಾಖಲಿಸುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಚುರುಕುಗೊಳಿಸಿದೆ. ಈವರೆಗೆ ಜಿಲ್ಲೆಯಲ್ಲಿ 5,963 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 7,45,335 ರೂ.ದಂಡ ವಿಧಿಸಲಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ 376 ಹೊಸ ಕರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 25,948 ತಲುಪಿದೆ. ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 268 ಮಂದಿ ಗುಣವಾಗಿದ್ದಾರೆ. ಗುಣವಾದವರ ಒಟ್ಟು ಸಂಖ್ಯೆ 20,854.
191 ಮಂದಿಗೆ ಸೋಂಕು: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 191 ಮಂದಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸಾವಿನ ಸಂಖ್ಯೆ 163ಕ್ಕೆ, ಒಟ್ಟು ಸೋಂಕಿತರ ಸಂಖ್ಯೆ 18,985ಕ್ಕೆೆ ಏರಿದೆ. ಶುಕ್ರವಾರ 225 ಮಂದಿ ಗುಣವಾಗಿ ಡಿಸ್ಚಾರ್ಜ್ ಆಗಿದ್ದಾರೆ. 1952 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡಿನಲ್ಲಿ 366 ಮಂದಿಗೆ ಸೋಂಕು: ಜಿಲ್ಲೆಯ 366 ಮಂದಿ ಒಳಗೊಂಡಂತೆ ಕೇರಳದಲ್ಲಿ ಶುಕ್ರವಾರ 9250 ಮಂದಿಯಲ್ಲಿ ಕೋವಿಡ್-19 ರೋಗ ಕಾಣಿಸಿಕೊಂಡಿದೆ. ಕಾಸರಗೋಡು ನಿವಾಸಿಯೊಬ್ಬರ ಸಹಿತ ರಾಜ್ಯದಲ್ಲಿ ಕೋವಿಡ್ ಬಾಧಿಸಿ 25 ಮಂದಿ ಮೃತಪಟ್ಟಿದ್ದಾರೆ. ಕಾಸರಗೋಡಿನ ಮೂವರು ಸೇರಿ ರಾಜ್ಯದಲ್ಲಿ ಶುಕ್ರವಾರ 11 ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಕಾಸರಗೋಡು ಜಿಲ್ಲೆಯ 449 ಸಹಿತ ರಾಜ್ಯದ 8048 ಮಂದಿ ಗುಣವಾಗಿದ್ದಾರೆ.