5ಎ ಕಾಲುವೆ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಿ

maski mla
ಬೆಂಗಳೂರಿನಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವಗುಪ್ತಾ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಮಹೇಶ ಅವರೊಂದಿಗೆ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಚರ್ಚಿಸಿದರು.
Published on

ಮಸ್ಕಿ: ಕ್ಷೇತ್ರದ ಮಹತ್ವದ ನೀರಾವರಿ ಯೋಜನೆಗಳಲ್ಲಿ ಒಂದಾದ ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ 5ಎ ಉಪ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವಗುಪ್ತಾ, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಮಹೇಶ ಅವರೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಚರ್ಚೆ ನಡೆಸಿದರು.

5ಎ ನಾಲೆ ನಿರ್ಮಾಣಕ್ಕೆ ಡಿಪಿಆರ್ ಬೇಗ ಸಿದ್ಧಗೊಳಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ನೀರಾವರಿ ಯೋಜನೆಗಳು ಬೇಗ ಜಾರಿಗೊಂಡರೆ ರೈತರ ಹೊಲಗಳಿಗೆ ನೀರುಣಿಸಿ ಗುಳೆ ಹೋಗುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ಮನವರಿಕೆ ಮಾಡಿದರು. ಕೆಬಿಜೆಎನ್‌ಎಲ್ ವ್ಯವಸ್ಥಾಪಕ ಕೃಷ್ಣಮೂರ್ತಿ ಕುಲಕರ್ಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net