

ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಣ ಮತ್ತು ಸಾರತಾ ಇಲಾಖೆ ವಿಜಯಪುರ, ಕ್ಷೇತ್ರ ಶಿಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಾರ್ಯಾಲಯ ಇಂಡಿ ವತಿಯಿಂದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಅಂಗವಾಗಿ ಶಿಕರ ದಿನಾಚರಣೆ ಸಮಾರಂಭವನ್ನು ಸೆಪ್ಟೆಂಬರ್ 5 ರಂದು ಬೆಳಗ್ಗೆ 10ಕ್ಕೆ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದೆ.
ಕಾತ್ರಾಳ&ಬಾಲಗಾಂವ ಗುರುದೇವಾಶ್ರಮದ ಡಾ.ಅಮೃತಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯತೆ ವಹಿಸಿ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಎಂಎಲ್ಸಿ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಸಂಸದೆ ಸುಧಾ ಮೂರ್ತಿ, ಶಾಸಕ ವಿಠ್ಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನಿಲಗೌಡ ಪಾಟೀಲ, ಪಿ.ಎಚ್.ಪೂಜಾರ, ಶಾಸಕ ಅಶೋಕ ಮನಗೂಳಿ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಅಧ್ಯೆ ಕಾಂತಾ ನಾಯಕ, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯ ಸಂಗಮೇಶ ಬಬಲೇಶ್ವರ, ಇಂಡಿ ಪುರಸಭೆ ಅಧ್ಯ ಲಿಂಬಾಜಿ ರಾಠೋಡ, ಉಪಾಧ್ಯ ಜಹಾಂಗೀರ ಸೌದಾಗರ ಅಗಮಿಸುವರು.
ವಿಶೇಷ ಆಹ್ವಾನಿತರಾಗಿ ಎಸಿ ಅಬೀದ್ ಗದ್ಯಾಳ, ಡಿಡಿಪಿಐ ಎನ್.ಎಚ್. ನಾಗೂರ, ವಿಜಯಪುರದ ಡಯಟ್ ಉಪನಿರ್ದೇಶಕ ಉಮಾದೇವಿ ಸೊನ್ನದ, ಇಂಡಿ ಪೊಲೀಸ್ ಉಪಾಧೀಕ ಜಗದೀಶ ಎಚ್.ಎಸ್, ತಹಸೀಲ್ದಾರ್ ಬಿ.ಎಸ್. ಕಡಕಭಾವಿ, ತಾ.ಪಂ ಇಒ ಬಾಬು ರಾಠೋಡ ಆಗಮಿಸುವರು ಎಂದು ಬಿಇಒ ಟಿ.ಎಸ್.ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡುಗಡ್ಡಿ, ನೋಡಲ್ ಅಧಿಕಾರಿ ಎ.ಓ.ಹೂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.