5ರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

CTD NAGARASABE ...
Published on

ಚಿತ್ರದುರ್ಗ: ನಗರಸಭೆ ಅಭಿವೃದ್ಧಿ ಕಾಮಗಾರಿಗಳಿಗೆ ಡಿ.5ರಂದು ಸಂಜೆ 4 ಕ್ಕೆ ನಗರಸಭೆ ಸಭಾಂಗಣದಲ್ಲಿ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ ಚಾಲನೆ ನೀಡಲಿದ್ದಾರೆ. ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ, ಕಸ ಸಂಗ್ರಹಣೆ ಹೊಸ ವಾಹನಗಳ ಉದ್ಘಾಟನೆ ಹಾಗೂ ಬಾಲಕಿಯರ ಸರ್ಕಾರಿ ಕಾಲೇಜು ಪಕ್ಕದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು. ಡಿ.6, 7ರಂದು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ 7.50 ಕೋಟಿ ರೂ. ವೆಚ್ಚದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ, ಒಳಚರಂಡಿ ಸೇರಿ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವರು ಎಂದು ಆಯುಕ್ತೆ ಎಂ. ರೇಣುಕಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net