ಹೊಸಪೇಟೆ: ತಾಲೂಕಿನ ಕಮಲಾಪುರ ಪಟ್ಟಣದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ೬ ರಿಂದ ೮ನೇ ತರಗತಿಯಲ್ಲಿ ಸೀಟುಗಳು ಖಾಲಿಯಿದ್ದು, ಅರ್ಹರಿಂದ ಅರ್ಜಿ ಕರೆಯಲಾಗಿದೆ.
ಶಾಲೆಯಲ್ಲಿ ೬ ರಿಂದ ೮ನೇ ತರಗತಿಗೆ ಪ್ರಸಕ್ತ ಸಾಲಿನಲ್ಲಿ ಕನಿಷ್ಠ ೨೦-೩೦ ಸೀಟುಗಳು ಖಾಲಿಯಿದ್ದು, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರೆöÊಸ್ತ, ಬೌದ್ಧ, ಜೈನ, ಪಾರ್ಸಿ ಹಾಗೂ ಸಿಖ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಮೊ.೯೯೬೪೭೩೨೭೧೮ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮುಖ್ಯೋಪಾಧ್ಯಾಯ ಮಂಜುನಾಥ್ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.