

ಮಡಿಕೇರಿ: ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೬.೯೦ ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೩೧.೫೩ ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ ೧.೮೦ ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ ೦.೩೮ ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ೦.೮೦ ಮಿ.ಮೀ. ಮಳೆಯಾಗಿದೆ.
ಜಿಲ್ಲೆಯ ಹೋಬಳಿವಾರುಗಳಾದ ಮಡಿಕೇರಿ ಕಸಬಾ ೪.೨೦, ನಾಪೋಕ್ಲು ೧.೬೦, ಸಂಪಾಜೆ ೭೭, ಭಾಗಮಂಡಲ ೪೩.೩೦, ವಿರಾಜಪೇಟೆ ೩.೬೦, ಹುದಿಕೇರಿ ೦.೫೦, ಪೊನ್ನಂಪೇಟೆ ೧, ಸೋಮವಾರಪೇಟೆ ಕಸಬಾ ೧.೨೦, ಶಾಂತಳ್ಳಿ ೨ ಮಿ.ಮೀ.ಮಳೆಯಾಗಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ ೨೮೫೯ ಅಡಿಗಳಿದ್ದು, ಬುಧವಾರ ೨೮೫೬.೮೧ ಅಡಿ ನೀರು ಸಂಗ್ರವಾಗಿದೆ. ಇಂದಿನ ನೀರಿನ ಒಳಹರಿವು ೨೮೩೦ ಕ್ಯುಸೆಕ್ ಇದ್ದು, ನೀರಿನ ಹೊರ ಹರಿವು ನದಿಗೆ ೨೦೦೦ ಕ್ಯುಸೆಕ್ ನೀರುಬಿಡಲಾಗುತ್ತಿದೆ.