

ಬಂಗಾರಪೇಟೆ: ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ಒಟ್ಟು 6 ಬೈಕ್ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.
ಕೋಲಾರ ನಿವಾಸಿಗಳಾದ ಶಹಬಾಜ್ ಪಾಷಾ (22), ನಿಜಾಂ ಪಾಷಾ (21) ಬಂಧಿತರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆ.28ರಂದು ಗುಲ್ಲಹಳ್ಳಿ ದೇವರಾಜ್ ಎಂಬುವವರು ಬೈಕ್ ನಿಲ್ಲಿಸಿ ಆಸ್ಪತ್ರೆ ಒಳ ಹೋಗಿ ಬರುವಷ್ಟರಲ್ಲಿ ಬೈಕ್ ಕಳವು ಆಗಿತ್ತು. ಅಂದೇ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ದಯಾನಂದ್ ನೇತತ್ವದ ತಂಡ ಕಾರ್ಯಾಚರಣೆ ಕೈಗೊಂಡು ಈಚೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದಾಗ ಆಸ್ಪತ್ರೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರವಾನಹ ಸೇರಿ ತಾಲೂಕಿನ ವಿವಿಧೆಡೆ ಇನ್ನೂ 5 ಬೈಕ್‌ಗಳನ್ನು ಕದ್ದಿರುವುದಾಗಿ ಬಾಯ್ಬಿಟ್ಟಿದ್ದರು. ಆರೋಪಿಗಳಿಂದ ಒಟ್ಟು 6 ಬೈಕ್‌ಗಳನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.