

ಕಾರವಾರ: ಶಾಲೆಗೆ ಏಳು ದಿನಗಳಿಗಿಂತ ಹೆಚ್ಚು ಗೈರಾಗುವ ವಿದ್ಯಾರ್ಥಿಗಳನ್ನು ಗುರುತಿಸಿ, ಅವರು ಬಾಲ ಕಾರ್ಮಿಕ ಪದ್ಧತಿಗೆ ಒಳಗಾಗಿದ್ದಾರೆಯೇ ಎಂದು ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಽಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಅವರಿಗೆ ಸೂಕ್ತ ಪುರ್ನವಸತಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳು ಮತ್ತು ಇದರ ನಿಷೇಧ ಕಾಯ್ದೆಯ ಬಗ್ಗೆ, ಇದರ ಉಲ್ಲಂಘನೆಯ ಕುರಿತ ದಂಡ ಮತ್ತು ಶಿಕ್ಷೆಯ ಬಗ್ಗೆ ಜಿಲ್ಲೆಯಲ್ಲಿನ ವಿವಿಧ ಸಂಸ್ಥೆಗಳ ಮಾಲೀಕರಿಗೆ ಅರಿವು ಮೂಡಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಪಟ್ಟ ಸಂಸ್ಥೆಯ ಮಾಲೀಕರ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಮಕ್ಕಳಿಗೆ ತಮ್ಮ ಸುತ್ತಮುತ್ತ ತಮ್ಮದೇ ವಯೋಮಾನದ ಬಾಲ ಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಗೆ ಮಾಹಿತಿ ನೀಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಉಪ ವಿಭಾಗಾಕಾರಿ ಕನಿಷ್ಕ ಇದ್ದರು.
ಜಿಲ್ಲಾದ್ಯಂತ 2024 ರ ಏಪ್ರಿಲ್‌ನಿಂದ 2025 ರ ಮಾರ್ಚ್ವರೆಗೆ ಜಿಲ್ಲೆಯಾದ್ಯಂತ ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆಗೆ 1756 ತಪಾಸಣೆಗಳನ್ನು ಕೈಗೊಂಡಿದ್ದು, 6 ಬಾಲ, ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ. 5 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಂದು ಜಿಲ್ಲಾ ಕಾರ್ಮಿಕ ಅಽಕಾರಿ ಲಲಿತಾ ಮಾಹಿತಿ ನಿಡಿದರು.