ಲಾರಿ, ಆಟೋಗಳ ನಡುವೆ ಭೀಕರ ಅಪಘಾತ; 6 ಮಂದಿ ಮೃತ್ಯು

Hospete Accident
Published on

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನರು ದಾರುಣವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬ್ರಿಡ್ಜ್​ ಬಳಿ ನಡೆದಿದೆ.

ಮೃತರನ್ನು ಯಾಸ್ಮೀನ್( 45), ಸಲೀಮಾ(40), ಜಹೀರ್( 16), ಸಪ್ರಾಬಿ( 55), ಕೌಸರ್ ಬಾನು( 35), ಇಬ್ರಾಹಿಂ (33), ಉಮೇಶ್( 27) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಇಬ್ಬರು ಮ್ಕಕಳು ಸೇರಿದಂತೆ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿ ವಿಮ್ಸ್​ಗೆ ದಾಖಲಿಸಲಾಗಿದೆ. ಮೃತರೆಲ್ಲರು ಬಳ್ಳಾರಿಯ ಕೌಲ್​ ಬಜಾರ್​ ನಿವಾಸಿಗಳು ಎಂದು ತಿಳಿದು ಬಂದಿದೆ.

ಬಳ್ಳಾರಿಯಿಂದ ತುಂಗಭದ್ರಾ ಅಣೆಕಟ್ಟು ವೀಕ್ಷಿಸಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಎರಡು ಆಟೋ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಸ್ತಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

Vijayanagara Accident
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net