6 ಲಕ್ಷ ರೂ. ಮೌಲ್ಯದ ಗಾಂಜಾ ವಶ, ಇಬ್ಬರ ಬಂಧನ

Published on

ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಾಕಾ ಸಮೀಪ ಹಂಚಿನಾಳ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಾಂಗೋಲಾ ತಾಲೂಕಿನ ಸಾಹೇಬರಾವ ವಿಶ್ವನಾತ ಪಾಲಿಕೆ (50), ಸೊಲ್ಲಾಪುರ ಜಿಲ್ಲೆಯ ಪಂಡರಪುರದ ಪುರುಷೋತ್ತಮ ರಾಮಚಂದ್ರ ಕೌಲಗಿ (42) ಬಂಧಿತರು. ಇವರಿಂದ 6 ಲಕ್ಷ ರೂ. ಮೌಲ್ಯದ 4 ಕೆಜಿ 180 ಗ್ರಾಂ ಗಾಂಜಾ ಹಾಗೂ ಒಂದು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಸಿಇಎನ್ ಅಪರಾಧ ವಿಭಾಗದ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ ಹಾಗೂ ಡಿಸಿಆರ್‌ಬಿ ಘಟಕದ ಎಎಸ್‌ಐ ಟಿ.ಕೆ. ಕೋಳಚಿ, ಎ.ಎನ್. ಮಸರಗಪ್ಪಿ, ವಿ.ವಿ. ಗಾಯಕವಾಡ ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.
 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net