6 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

cybe crime
Published on

ಹುಬ್ಬಳ್ಳಿ: ಸ್ಟಾಕ್ ಮಾರ್ಕೆಟಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ವ್ಯಕ್ತಿಯೊಬ್ಬರ ಖಾತೆಯಿಂದ 6 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮುರುಗೇಶ ವಂಚನೆಗೆ ಒಳಗಾದವರು. ಮೊಬೈಲ್ ಫೋನ್‌ಗೆ ಲಿಂಕ್ ಕಳುಹಿಸಿ ವಾಟ್ಸ್ ಆ್ಯಪ್ ಗ್ರೂಪ್‌ಗೆ ಸೇರಿಸಿದ್ದಾರೆ. ಡಿಟಿಗಾಮ್ಯಾಕ್ಸ್ ಆ್ಯಪ್ ಡೌನ್‌ಲೋಡ್ ಮಾಡಿಸಿ ವಿವಿಧ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ ಎಂದು ಸಿಇಎನ್ ಕ್ರೈಂ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net