ಡ್ರಗ್ಸ್ ಜಾಲ ನಿರ್ನಾಮಕ್ಕೆ 6 ತಿಂಗಳ ಟಾರ್ಗೆಟ್

G parameshwar
Published on

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಮಾಡಲು ಬಿಡುವುದಿಲ್ಲ. ಡ್ರಗ್ಸ್ ಜಾಲ ನಿರ್ನಾಮ ಮಾಡಲು ಪೊಲೀಸ್ ಅಧಿಕಾರಿಗಳಿಗೆ 6 ತಿಂಗಳ ಟಾರ್ಗೆಟ್ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ಹು-ಧಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಸಂಜೆ ಇಲಾಖೆಯ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸೂಚನೆ ಧಾರವಾಡ ಜಿಲ್ಲಾ ಪೊಲೀಸ್​ರಿಗೂ ಅನ್ವಯಿಸುತ್ತದೆ. ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಈಗಿನಿಂದಲೇ ಕಠಿ ಣ ಕ್ರಮಕ್ಕೆ ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹು-ಧಾ ದಲ್ಲಿ ಡ್ರಗ್ಸ್ ಸಿಗುವುದಿಲ್ಲ ಎಂಬುದು 6 ತಿಂಗಳಲ್ಲಿ ಖಾತರಿಯಾಗಬೇಕು. ತಪ್ಪಿದಲ್ಲಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಐಪಿಎಸ್ ಅಧಿಕಾರಿಗಳ ಹಂಚಿಕೆ ಸರಿಯಾಗಿ ಆಗಿಲ್ಲ. ಬಹಳ ವರ್ಷಗಳಿಂದ ಈ ಕೊರತೆ ಇದೆ. ಇದರಿಂದ ಎಸ್​ಪಿ ದರ್ಜೆಯ ಅಧಿಕಾರಿಗಳಿಗೆ ಬಡ್ತಿ ನೀಡಲು ಆಗುತ್ತಿಲ್ಲ. ಹಿರಿಯ ಐಪಿಎಸ್ ಅಧಿಕಾರಿಗಳನ್ನು ಡಿಐಜಿ ಹಾಗೂ ಐಜಿ ವೃಂದದ ಅಧಿಕಾರಿಗಳ ಸ್ಥಾನಕ್ಕೆ ನಿಯುಕ್ತಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಶಾಸಕ ಪ್ರಸಾದ ಅಬ್ಬಯ್ಯ, ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net