ಮಂಗಳೂರು ನಗರದಲ್ಲಿ ಮಾದಕ ವಸ್ತು ಸೇವಿಸಿದ 6 ಮಂದಿ ಬಂಧನ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಕ್ತಿನಗರದ ಕಲಾಂಗಣ್ ಹಾಲ್ ಬಳಿ ಮಾದಕ ವಸ್ತುವನ್ನು ಸೇವನೆ ಮಾಡಿದ್ದ ಕಾರ್ಕಳ ಬೈಲೂರು ನಿವಾಸಿ ವಿಲ್ಪ್ರೇಡ್ ಡಿಸೋಜ (37) ಎಂಬಾತನನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ಹರೇಕಳ ಗ್ರಾಮದ ಬೈತಾರುವಿನ ನದಿಯ ಬಳಿ ಮಾದಕ ವಸ್ತು ಸೇವನೆ ನಶೆಯಲ್ಲಿದ್ದ ಹರೇಕಳ ದೇರಡ್ಕದ ಫಯಾಜ್ (34) ಎಂಬಾತನನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಾರ್ಗನ್ಸಗೇಟ್ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಅರ್ಫಖ್ ಅಬ್ದುಲ್ಲಾ (34) ಮತ್ತು ಮೆಹರೂಫ್ (30) ಎಂಬವರನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೈಕಂಬ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆಯ ನಶೆಯಲ್ಲಿದ್ದ ಅಲನ್ ಡೇವಿಡ್ ಸಿಕ್ವೆರಾ (21) ಮತ್ತು ಕಲಂದರ್ (34) ಎಂಬವರನ್ನು ಬಜಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net