

ಯಳಂದೂರು: ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6 ಸಾವಿರ ವಿದ್ಯಾರ್ಥಿಗಳಿಗೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ ವತಿಯಿಂದ ಸ್ವೆಟರ್ ವಿತರಣೆ ಮಾಡಲಾಗುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್ ಮಾಹಿತಿ ನೀಡಿದರು.
ತಾಲೂಕಿನ ಹೊನ್ನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಬಿಜೆಪಿ ವತಿಯಿಂದ ಸ್ವೆಟರ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳು ಚಳಿಗಾಲವಾಗಿದೆ. ಚಿಕ್ಕಮಕ್ಕಳಲ್ಲಿ ಸಾಮಾನ್ಯವಾಗಿ ಈ ಸಂದರ್ಭದಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಸಾಮಾನ್ಯ ಕಾಯಿಲೆಗಳು ಕಂಡು ಬರುತ್ತದೆ. ಈ ಸಂದರ್ಭದಲ್ಲಿ ಮಕ್ಕಳನ್ನು ಬೆಚ್ಚಗಿಡಬೇಕು. ಕೋವಿಡ್ ನಂತರ ಜ್ವರವು ರೂಪಾಂತರಗೊಳ್ಳುತ್ತಿದೆ. ಆದರೆ, ಆತಂಕ ಪಡುವ ಅವಶ್ಯಕತೆ ಇಲ್ಲ. ನಾವು ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ವತಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ ಅವರು ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6 ಸಾವಿರ ಮಕ್ಕಳಿಗೆ ಉಚಿತವಾಗಿ ಹಂಚುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಈಗ ಇದಕ್ಕೆ ಹೊನ್ನೂರು ಗ್ರಾಮದ ಶಾಲೆಯಿಂದ ಅಧಿಕೃತವಾಗಿ ಚಾಲನೆ ನೀಡಲಾಗಿದೆ ಎಂದರು.
ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಲ್ಲಿ ಬಡವರೇ ಹೆಚ್ಚಾಗಿರುತ್ತಾರೆ. ಇಂತಹ ಮಕ್ಕಳ ಆರೋಗ್ಯ ದೃಷ್ಟಿಯಿಂದ ಸ್ವೆಟರ್‌ಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್, ಮಂಡಲ ಅಧ್ಯಕ್ಷ ಅನಿಲ್ ಗ್ರಾಪಂ ಅಧ್ಯಕ್ಷ ಗುರುಪ್ರಸಾದ್, ಸದಸ್ಯರಾದ ಜಯಮ್ಮ, ಚಿನ್ನಪ್ಪ, ಕುಮಾರ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಾಂಬಳ್ಳಿ ರಾಮು, ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತಾ ಮೋಹನ್, ಮಂಡಲ ಪ್ರಧಾನ ಕಾರ್ಯದರ್ಶಿ ಕೆಂಪರಾಜು, ಮುಖ್ಯ ಶಿಕ್ಷಕ ಶಿವಮಾದಯ್ಯ, ಎಚ್.ಎಂ. ನಂಜುಂಡಸ್ವಾಮಿ, ಮಹೇಶ್, ದುಂಡುಮಾದ ಶೆಟ್ಟಿ, ಸಿದ್ದಶೆಟ್ಟಿ, ಶಾಂತರಾಜು, ಸುರೇಶ, ನಿಂಗರಾಜು, ಮಾಧು, ಪರಮೇಶ್, ಸಿದ್ದರಾಜು, ಕಾಮರಾಜು, ಪ್ರಕಾಶ್, ಶಿವು, ಮಹೇಶ್ ಇದ್ದರು.