ಜಿಲ್ಲೆಯ 63 ಪ್ರಕರಣಗಳು ಇತ್ಯರ್ಥ: ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಮಾಹಿತಿ

court
Published on

ಮಂಡ್ಯ: ಕಾನೂನು ಸೇವೆಗಳ ಪ್ರಾಧಿಕಾರ, ಮಧ್ಯಸ್ಥಿಕೆ ಮತ್ತು ಸಂಧಾನ ಯೋಜನಾ ಸಮಿತಿ ( ಎಂ.ಸಿ.ಪಿ.ಸಿ) ಹಾಗೂ ಸರ್ವೋಚ್ಚ ನ್ಯಾಯಾಲಯದ ಮಾರ್ಗದರ್ಶನಲ್ಲಿ ಜು.1ರಿಂದ ಹಮ್ಮಿಕೊಂಡಿದ್ದ ’ವಿಶೇಷ ಮಧ್ಯಸ್ಥಿಕೆ ಅಭಿಯಾನ-ರಾಷ್ಟ್ರಕ್ಕಾಗಿ 90 ದಿನಗಳ ಕಾರ್ಯಾಚರಣೆ’ ಮುಕ್ತಾಯವಾಗಿದೆ.

ಅದರಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯಿಂದ ನಡೆಸಲಾಗಿದ್ದ ವಿಶೇಷ ಮಧ್ಯಸ್ಥಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 48,932 ಪ್ರಕರಣ ಬಾಕಿ ಇದ್ದವು. ಈ ಪೈಕಿ 2,595 ಪ್ರಕರಣಗಳನ್ನು ಗುರುತಿಸಿ ಮಧ್ಯಸ್ಥಿಕೆಗೆ ಕೇಂದ್ರಗಳಿಗೆ ಕಳುಹಿಸಲಾಯಿತು. ಅದರಲ್ಲಿ 2,121 ಪ್ರಕರಣವನ್ನು ಮಧ್ಯಸ್ಥಿಕೆಗೆ ತೆಗೆದುಕೊಳ್ಳಲಾಗಿತ್ತು. ಅಂತೆಯೇ 15 ವೈವಾಹಿಕ ವಿವಾದ, 1 ಕೌಟುಂಬಿಕ ದೌರ್ಜನ್ಯ ಪ್ರಕರಣ, 22 ಚೆಕ್‌ಬೌನ್ಸ್ ಪ್ರಕರಣ, 13 ವಿಭಾಗ ಪ್ರಕರಣ ಹಾಗೂ 12 ಇತರೆ ಪ್ರಕರಣ ಒಳಗೊಂಡಂತೆ ಒಟ್ಟು 63 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. 1602 ಪ್ರಕರಣ ಇತ್ಯರ್ಥಗೊಂಡಿರುವುದಿಲ್ಲ. ಉಳಿದ 930 ಪ್ರಕರಣ ಇನ್ನೂ ಮಧ್ಯಸ್ಥಿಕೆ ವಹಿಸಬೇಕಾಗಿದ್ದು, ಜಿಲ್ಲಾ ಮತ್ತು ತಾಲೂಕು ಮಧ್ಯಸ್ಥಿಕೆ ಕೇಂದ್ರದಲ್ಲಿ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net