64 ಲಕ್ಷ ರೂ. ಮೌಲ್ಯದ ಮದ್ಯ ವಶ

64 ಲಕ್ಷ ರೂ. ಮೌಲ್ಯದ ಮದ್ಯ ವಶ
Published on

ಹಾಸನ: ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಹಳೇಬೀಡು ಪೊಲೀಸರು 64 ಲಕ್ಷ ರೂ. ಬೆಲೆಯ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಹಳೇಬೀಡು ಹೋಬಳಿ ನಂಜಾಪುರ ಗ್ರಾಮದ ಕೃಷ್ಣ (35) ಹಾಗೂ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಕುಪ್ಪಹಳ್ಳಿ ಗ್ರಾಮದ ಆಕಾಶ್ ಬಂಧಿತ ಆರೋಪಿಗಳು.
ಬುಧವಾರ ತಡರಾತ್ರಿ 1.30ರ ಸಮಯದಲ್ಲಿ ಬೇಲೂರು ರಸ್ತೆ ಕಡೆಯಿಂದ ಕಾರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಾಗಿಸುತ್ತಿರುವುದಾಗಿ ಹಳೇಬೀಡು ಪಿಎಸ್‌ಐ ಸಿದ್ದಲಿಂಗ ಬನಸೆ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಕಾರ್ಯಪ್ರವೃತ್ತರಾದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರನ್ನು ತಡೆದು ನಿಲ್ಲಿಸಿ, ಚಾಲಕನನ್ನು ವಿಚಾರಿಸಿದ್ದಾರೆ. ಆತ ಗಾಬರಿಗೊಂಡಿದ್ದು ನೋಡಿ ಅನುಮಾನ ಬಂದು ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳ ಸಮೇತ ಕಾರನ್ನು ಠಾಣೆ ಹತ್ತಿರ ತಂದು ಪರಿಶೀಲನೆ ನಡೆಸಿದಾಗ ಅದರಲ್ಲಿ 64,69,488 ರೂ. ಬೆಲೆಯ ವಿವಿಧ ಬ್ರಾಂಡ್ ಮದ್ಯ ಇರುವುದು ಕಂಡು ಬಂದಿದೆ. ಕೂಡಲೇ ಇಬ್ಬರನ್ನೂ ಬಂಧಿಸಿ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net